Advertise

07 August 2023

08.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮೋಡ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಕರಾವಳಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಮಟ್ಟಿಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮುಂಗಾರು ದುರ್ಬಲವಾಗಿದ್ದರಿಂದ ಘಟ್ಟ ಪ್ರದೇಶಗಳಿಗೆ ಮೋಡಗಳು ಸಾಗಲು ಶಕ್ತವಾಗಿಲ್ಲ. 
ಆಗಷ್ಟ್ 9ರ ನಂತರ ಕರಾವಳಿಯಲ್ಲಿಯೂ ಮಳೆ ಕ್ಷೀಣಿಸಲಿದೆ. 


No comments:

Post a Comment

20.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...