Advertise

08 August 2023

09.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.08. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಕಡಿಮೆ ಇದ್ದರೂ ಬರುವ ಮಳೆಯ ರಭಸ ಹೆಚ್ಚಿರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 9ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಷ್ಣಾಂಶ ಏರಿಕೆಯಿಂದಾಗಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 


No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...