Advertise

10 August 2023

11.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಅನಿರೀಕ್ಷಿತ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಶಿವಮೊಗ್ಗ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಪಾವಗಢ, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ 

ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ತೀರಾ ದುರ್ಬಲಗೊಂಡು ವಾತಾವರಣದ ಉಷ್ಣಾಂಶ ಏರಿಕೆಯಿಂದಾಗಿ ರಾಜ್ಯದ ಅಲ್ಲಲ್ಲಿ ಸಂಜೆಯ ವೇಳೆಗೆ ಅನಿರೀಕ್ಷಿತ ಗುಡುಗು, ಸಿಡಿಲು ಸಹಿತ ಮಳೆಯ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...