Advertise

11 August 2023

12.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ತೀರಾ ದುರ್ಬಲತೆ ಮುಂದುವರಿಯಲಿದೆ. ಇನ್ನೆರಡು ದಿನಗಳಲ್ಲಿ ರಾಜ್ಯದಾದ್ಯಂತ ಈಗಿನ ಗುಡುಗು ಸಹಿತ ಮಳೆಯ ವಾತಾವರಣವು ಅಂತ್ಯಗೊಂಡು ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

13.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮ...