Advertise

13 August 2023

14.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
 
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ - ಕಾಸರಗೋಡು ಗಡಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಹಾಸನ ಜಿಲ್ಲೆಯ ಹಾಸನ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18ರಿಂದ ಉತ್ತರ ಕನ್ನಡ ಕರಾವಳಿ ಹಾಗೂ ಆಗಷ್ಟ್ 19ರಿಂದ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ  ಮಳೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...