Advertise

16 August 2023

16.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಉತ್ತರ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಗದಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಭಾಗಗಳಲ್ಲಿ ಒಂದೆರಡು ಸೀಮಿತ ಪ್ರದೇಶದಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18ರಿಂದ 21ರ ತನಕ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ನಂತರ ಮತ್ತೆ ಒಣ ಹವೆ ಮುಂದುವರಿಯಲಿದೆ. 


No comments:

Post a Comment

13.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮ...