Advertise

18 August 2023

19.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು ಆಗಷ್ಟ್ 21ರಿಂದ ಕರಾವಳಿಯಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...