Advertise

25 August 2023

26.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಆಗುಂಬೆ ಹಾಗೂ ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಹೆಚ್ಚಿದೆ. 

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಪ್ರಕಾರ ಸೆಪ್ಟೆಂಬರ್ 3ನೇ ವಾರದಲ್ಲಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಬಹುದು. ಒಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಲಕ್ಷಣಗಳಿವೆ. ಜನವರಿಯ ಮಧ್ಯ ಅಥವಾ ಕೊನೇಯ ತನಕವೂ ಹಿಂಗಾರು ಮುಂದುವರಿಯುವ ಸಾಧ್ಯತೆ ಇದೆ. ಒಂದು ಮಾಹಿತಿಯಂತೆ ಹಿಂಗಾರು ಸಹ ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ತೋರುತ್ತಿದೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...