Advertise

27 August 2023

28.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು(ದಕ್ಷಿಣ), ಹಾಸನ, ಮೈಸೂರು (ಉತ್ತರ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಚುರುಕಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೂ ಸೆಪ್ಟೆಂಬರ್ 4ರಿಂದ ಕರಾವಳಿ ತೀರದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 


No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...