Advertise

28 August 2023

29.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಮೋಡದ ವಾತಾವರಣ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚನೆಯಂತೆ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 6ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ದಿನ ಬಿಟ್ಟು ದಿನ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...