Advertise

30 September 2023

01.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಇವತ್ತು ಸಂಜೆ ಅಥವಾ ರಾತ್ರಿ ಮಲ್ವಾನ್ ಹಾಗೂ ರತ್ನಗಿರಿ ಮಧ್ಯ ಭೂಮಿಗೆ ಪ್ರವೇಶಿಸುವ ಸಾಧ್ಯತೆ ಇದೆ. 
ಒಕ್ಟೊಬರ್ 2 ರಿಂದ ರಾಜ್ಯದ ಕರಾವಳಿ ಭಾಗಗಳಿಲ್ಲಿಯೂ ಮಳೆಯ ತೀವ್ರತೆ ಕಡಿಮೆಯಾಗಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ. 
ಒಕ್ಟೊಬರ್ 4 ನೇ ತಾರೀಖಿನಿಂದ ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. 



29 September 2023

30.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಮಂಗಳೂರು, ಮೂಡಬಿದರೆ, ಕಾರ್ಕಳ, ಬಂಟ್ವಾಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ ಒಂದೆರಡು ಕಡೆ, ವಿಜಯಪುರದ ಒಂದೆರಡು ಕಡೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಪ್ರಸ್ತುತ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಒಕ್ಟೊಬರ್ 1ನೇ ತಾರೀಕಿನ ಸಂಜೆ ಮಹಾರಾಷ್ಟ್ರದ  ಮಲ್ವಾನ್ ಹಾಗೂ ರತ್ನಗಿರಿ ಮಧ್ಯ ಭೂಮಿಗೆ ಪ್ರವೇಶಿಸುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿಯ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ. 

28 September 2023

29.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರಿನ ಒಂದೆರಡು ಕಡೆ, ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ಹಾವೇರಿಯ ಒಂದೆರಡು ಕಡೆ, ಬೆಳಗಾವಿ ಸೇರಿದಂತೆ ಕರ್ನಾಟಕ - ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಗೋವಾ ಕರಾವಳಿಯಿಂದ ಸ್ವಲ್ಪ ಮೇಲೆ ಮಲ್ವಾನ್ ಕಡಲ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 30ರಂದು ಶಿಥಿಲಗೊಳ್ಳುವ ಸಾಧ್ಯತೆ ಇದ್ದು. ಒಕ್ಟೊಬರ್ 1ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. 
ಜೊತೆಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆ ಇದೆ. 

27 September 2023

28.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ ಹಾಗೂ ಉಡುಪಿಯ ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗಿನ ತಲಕಾವೇರಿ, ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ, ಶಿವಮೊಗ್ಗದ ಶಿವಮೊಗ್ಗ, ಭದ್ರಾವತಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಒಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಸಾಧ್ಯತೆ ಇದೆ. ಹಿಂಗಾರು ಸಾಮಾನ್ಯವಾಗಿರುವ ವರದಿಗಳು ಬರುತ್ತಿವೆ. 


26 September 2023

27.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್ (ಮಹಾರಾಷ್ಟ್ರ - ಕರ್ನಾಟಕ ಗಡಿ ಭಾಗಗಳಲ್ಲಿ) ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಬಹುತೇಕ ಭಾಗಗಳಲ್ಲಿ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಜ್ಯದಲ್ಲಿ ಈಗಿನ ಮಳೆಯ ವಾತಾವರಣವು ಒಕ್ಟೊಬರ್ 2ನೇ ತಾರೀಕಿನವರೆಗೆ ಮುಂದುವರಿಯುವ ಲಕ್ಷಣಗಳಿವೆ ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯಬಹುದು. 

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದು, ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಒಕ್ಟೊಬರ್ 2ನೇ ವಾರದ ನಂತರ ಹಿಂಗಾರು ಆರಂಭವಾಗಬಹುದು. 

25 September 2023

26.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು - ದಕ್ಷಿಣ ಕನ್ನಡ ಗಡಿಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಭಾರೀ ಮಳೆಯ ಸಾಧ್ಯತೆ ಇದೆ. 

ರಾಜ್ಯದ ಈಗಿನ ಮಳೆಯ ವಾತಾವರಣವು ಒಕ್ಟೊಬರ್ ಮೊದಲ ವಾರದ ತನಕವೂ ಮುಂದುವರಿಯುವ ಲಕ್ಷಣಗಳಿವೆ. 

24 September 2023

25.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಕಡಿಮೆ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಿಂದ ಬೀಸುತ್ತಿರುವ ಗಾಳಿಯ ಒತ್ತಡ (ಮುಂಗಾರು) ತೀರಾ ದುರ್ಬಲಗೊಂಡಿದ್ದರಿಂದ ಹಾಗೂ ವಾತಾವರಣದ ಅಧಿಕ ಉಷ್ಣತೆಯಿಂದಾಗಿ ಪೂರ್ವ ದಿಕ್ಕಿನಿಂದ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯಾಗುತ್ತಿದೆ. 

23 September 2023

24.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಉಡುಪಿ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಹಾಸನ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 


22 September 2023

23.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು, ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಕುದುರೆಮುಖ, ಶಿೃಂಗೇರಿ, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಧಾರವಾಡ, ಬೆಳಗಾವಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಯಾದಗಿರಿ ಜಿಲ್ಲೆಯಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಸೆಪ್ಟೆಂಬರ್ 24ರ ನಂತರ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ದಕ್ಷಿಣ ಒಳನಾಡು ಭಾಗಗಳಲ್ಲಿ  ಸೆಪ್ಟೆಂಬರ್ 30ರ ತನಕವೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 



21 September 2023

22.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ದಕ್ಷಿಣ ಕನ್ನಡ ಗಡಿಭಾಗಗಳ ಸುತ್ತಮುತ್ತ, ಧರ್ಮಸ್ಥಳ, ಕಾರ್ಕಳ, ಕುದುರೆಮುಖ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಕಾಸರಗೋಡು, ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡ, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಇರಬಹುದು. 

ಮೈಸೂರು, ಹಾಸನ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಗದಗ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಸೆಪ್ಟೆಂಬರ್ 22ರ ತನಕ ಉತ್ತರ ಒಳನಾಡು ಹಾಗೂ ಸೆಪ್ಟೆಂಬರ್ 24ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 27ರಿಂದ 3 ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
- ಸಾಯಿಶೇಖರ್ ಬಿ


20 September 2023

21.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಬೆಂಗಳೂರು, ಕೋಲಾರ, ತುಮಕೂರು, ಪಾವಗಡ, ಬೀದರ್ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಸೆಪ್ಟೆಂಬರ್ 21ರಿಂದ ರಾಜ್ಯದ ಒಳನಾಡು ಭಾಗಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


19 September 2023

20.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಹಾಸನ, ಬೆಂಗಳೂರು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದೊಂದಿಗೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಸೆಪ್ಟೆಂಬರ್ 21ರಿಂದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


18 September 2023

19.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡದ ಕಾಸರಗೋಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಸಾಧ್ಯತೆಯೂ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ವಾಯುಭಾರ ಕುಸಿತದಂತ ತಿರುವಿಕೆ ರಾಜಸ್ಥಾನ ತಲುಪಿದ್ದು ದಕ್ಷಿಣ ರಾಜಸ್ಥಾನ ಮರುಭೂಮಿಯಲ್ಲಿ ಹಾಗೂ ಉತ್ತರ ಗುಜರಾತ್ ಉತ್ತಮ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 21ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇದು ಇವತ್ತು ಸಂಜೆ ಅಥವಾ ರಾತ್ರಿ ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 


17 September 2023

18.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಸೆಪ್ಟೆಂಬರ್ 19ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಸೆಪ್ಟೆಂಬರ್ 21ರಿಂದ ಮಲೆನಾಡು, ಒಳನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

16 September 2023

17.09.2023ಲರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಉತ್ತಮ ಮಳೆಯ ಸಾಧ್ಯತೆ ಇದೆ. 

ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉತ್ತರ ಮಹಾರಾಷ್ಟ್ರ ಭಾರಿ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 17ರಂದು ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. 
ರಾಜ್ಯದ ಕರಾವಳಿ ಭಾಗಗಳಲ್ಲಿ ಸೆ. 17ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಸೆ. 24ರ ತನಕ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 20ರಿಂದ 4 ದಿನಗಳ ಕಾಲ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 



15 September 2023

16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮಲೆನಾಡು ಭಾಗಗಳಲ್ಲಿ ತುಂತುರು ಇರಬಹುದು. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ. 

ಮಧ್ಯಪ್ರದೇದ ಈಗಿನ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಮಧ್ಯಪ್ರದೇಶ, ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಸೆ. 16 ಹಾಗೂ 17ರಂದು ಮಹಾರಾಷ್ಟ್ರ ಹಾಗೂ ಗುಜರಾತ್ಕ ರಾವಳಿಯ ಮೂಲಕ ಸಾಕಿ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. 

ಸೆಪ್ಟೆಂಬರ್ 21ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಸಹ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 


14 September 2023

15.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುನ್ಸೂಚನೆಯಂತೆ ಸಾಮಾನ್ಯ ಇದ್ದರೂ ಪಶ್ಚಿಮ ಬಂಗಾಳದ ವಾಯುಭಾರ ಕುಸಿತದಂತ ತಿರುವಿಕೆ ಪ್ರಭಾವದಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

ಮೈಸೂರು, ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 

 ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯು  ಛತ್ತೀಸಘಡ, ಮಧ್ಯಪ್ರದೇಶ ಮೂಲಕ ಸೆಪ್ಟೆಂಬರ್ 16,17ರಂದು ಮಹಾರಾಷ್ಟ್ರ ಪ್ರವೇಶಿಸಿ, 18ರಂದು ಅರಬ್ಬಿ ಸಮುದ್ರ ಪ್ರವೇಶಿಸುವ ಲಕ್ಷಣಗಳಿವೆ. 
ಇದರ ಪರಿಣಾಮದಿಂದ ರಾಜ್ಯದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡರೂ ಒಳನಾಡು ಭಾಗಗಳಲ್ಲಿ ಅಷ್ಟೇನು ಪರಿಣಾಮದ ಲಕ್ಷಣಗಳಿಲ್ಲ 




13 September 2023

14.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಾಗಲೇ ಮುಂಜಾನೆ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆಯಾಗಿದ್ದು, ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ಮಳೆಯ ಮುನ್ಸೂಚನೆ ಇರವುದಿಲ್ಲ. ವಾತಾವರಣದ ಅಧಿಕ ತಾಪಮಾನದಿಂದಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಭೂಪ್ರದೇಶದ ಮೂಲಕ ಸಾಗಿ ಸೆಪ್ಟೆಂಬರ್ 18ರಂದು ಮಹಾರಾಷ್ಟ್ರ ಕರಾವಳಿಯ ತಲಪುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ  ಪ. ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ ಹೆಚ್ಚಿನ ಮಳೆಯ ಸಾಧ್ಯತೆ ಇದ್ದು, ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 16 ರಿಂದ 18ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಇದರ ಪ್ರಭಾವದಿಂದ ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ನಿರೀಕ್ಷೆ ಇದೆ. ಕರಾವಳಿಗೆ ಅಷ್ಟೇನು ಪರಿಣಾಮವಿಲ್ಲದಿದ್ದರೂ. ಒಂದೆರಡು ದಿನ ಮಳೆ ಸ್ವಲ್ಪ ಜಾಸ್ತಿ ಇರಬಹುದು. 



07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...