Advertise

02 September 2023

03.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ. 

ಚಾಮರಾಜನಗರ, ಮೈಸೂರು ಹಾಗೂ ಹಾಸನ ಪೂರ್ವ ಭಾಗಗಳಲ್ಲಿ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಗದಗ, ಬಾಗಲಕೋಟೆ, ವಿಜಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಹಾವೇರಿ, ಧಾರವಾಡ ರಾಯಚೂರು, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿದಿದ್ದು, ಕರಾವಳಿ ಭಾಗಗಳಲ್ಲಿ ಇವತ್ತಿನಿಂದ ದಿನದಲ್ಲಿ ಮೋಡ ಕವಿದ ವಾತಾವರಣದ ಸಮಯ ಅಧಿಕವಾಗಿರಬಹುದು. ಸೆಪ್ಟೆಂಬರ್ 6ರಿಂದ ಮುಂಗಾರು ಅಲ್ಪ ಚೇತರಿಸಿಕೊಂಡು ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಬಹುದು. 

No comments:

Post a Comment

17.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ  ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ...