06.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗದ ಒಂದೆರಡು ಕಡೆ (ದಾವಣಗೆರೆ ಗಡಿ ಭಾಗಗಳಲ್ಲಿ), ಬಳ್ಳಾರಿ - ಆಂದ್ರಾ ಗಡಿಭಾಗಗಳಲ್ಲಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ಮುಂಗಾರು ಸ್ವಲ್ಪ ಚುರುಕಾಗಿದ್ದು, ಮುಂದಿನ 10 ದಿನಗಳವರೆಗೂ ಈ ಮಳೆಯ ವಾತಾವರಣವು ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment