Advertise

06 September 2023

07.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಕರಾವಳಿ ಭಾಗಗಳಲ್ಲಿ ಮಾತ್ರ ಸ್ವಲ್ಪ ಮಟ್ಟಿಗೆ ಮಳೆಯ ಲಕ್ಷಣಗಳಿವೆ. ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 6ರಿಂದ 12ರ ತನಕ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. 
ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕಡಲ ತೀರದಲ್ಲಿ ವಾಯುಭಾರ ಕುಸಿತದಂತ ದೀರ್ಘ ತಿರುಗುವಿಕೆ ಮಾತ್ರ ಇದೆ. ವಾಯುಭಾರ ಕುಸಿತದ ಪೂರ್ವ ಹಂತ. ಅದು ಆ ಹಂತದಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ 

No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...