09.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಒಳನಾಡಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗಿದ್ದು ಸೆಪ್ಟೆಂಬರ್ 12ರ ನಂತರ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.
No comments:
Post a Comment