10.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಸೆಪ್ಟೆಂಬರ್ 18ರ ತನಕವೂ ದಿನಕ್ಕೆ ಒಂದೆರಡು ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಯಚೂರು, ಯಾದಗಿರಿ ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಮುಂದಿನ 10 ದಿನಗಳವರೆಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment