Advertise

13 September 2023

14.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಾಗಲೇ ಮುಂಜಾನೆ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆಯಾಗಿದ್ದು, ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ಮಳೆಯ ಮುನ್ಸೂಚನೆ ಇರವುದಿಲ್ಲ. ವಾತಾವರಣದ ಅಧಿಕ ತಾಪಮಾನದಿಂದಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಭೂಪ್ರದೇಶದ ಮೂಲಕ ಸಾಗಿ ಸೆಪ್ಟೆಂಬರ್ 18ರಂದು ಮಹಾರಾಷ್ಟ್ರ ಕರಾವಳಿಯ ತಲಪುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ  ಪ. ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ ಹೆಚ್ಚಿನ ಮಳೆಯ ಸಾಧ್ಯತೆ ಇದ್ದು, ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 16 ರಿಂದ 18ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಇದರ ಪ್ರಭಾವದಿಂದ ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ನಿರೀಕ್ಷೆ ಇದೆ. ಕರಾವಳಿಗೆ ಅಷ್ಟೇನು ಪರಿಣಾಮವಿಲ್ಲದಿದ್ದರೂ. ಒಂದೆರಡು ದಿನ ಮಳೆ ಸ್ವಲ್ಪ ಜಾಸ್ತಿ ಇರಬಹುದು. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...