Advertise

14 September 2023

15.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುನ್ಸೂಚನೆಯಂತೆ ಸಾಮಾನ್ಯ ಇದ್ದರೂ ಪಶ್ಚಿಮ ಬಂಗಾಳದ ವಾಯುಭಾರ ಕುಸಿತದಂತ ತಿರುವಿಕೆ ಪ್ರಭಾವದಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

ಮೈಸೂರು, ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 

 ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯು  ಛತ್ತೀಸಘಡ, ಮಧ್ಯಪ್ರದೇಶ ಮೂಲಕ ಸೆಪ್ಟೆಂಬರ್ 16,17ರಂದು ಮಹಾರಾಷ್ಟ್ರ ಪ್ರವೇಶಿಸಿ, 18ರಂದು ಅರಬ್ಬಿ ಸಮುದ್ರ ಪ್ರವೇಶಿಸುವ ಲಕ್ಷಣಗಳಿವೆ. 
ಇದರ ಪರಿಣಾಮದಿಂದ ರಾಜ್ಯದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡರೂ ಒಳನಾಡು ಭಾಗಗಳಲ್ಲಿ ಅಷ್ಟೇನು ಪರಿಣಾಮದ ಲಕ್ಷಣಗಳಿಲ್ಲ 




No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...