Advertise

17 September 2023

18.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಸೆಪ್ಟೆಂಬರ್ 19ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಸೆಪ್ಟೆಂಬರ್ 21ರಿಂದ ಮಲೆನಾಡು, ಒಳನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...