Advertise

18 September 2023

19.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡದ ಕಾಸರಗೋಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಸಾಧ್ಯತೆಯೂ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ವಾಯುಭಾರ ಕುಸಿತದಂತ ತಿರುವಿಕೆ ರಾಜಸ್ಥಾನ ತಲುಪಿದ್ದು ದಕ್ಷಿಣ ರಾಜಸ್ಥಾನ ಮರುಭೂಮಿಯಲ್ಲಿ ಹಾಗೂ ಉತ್ತರ ಗುಜರಾತ್ ಉತ್ತಮ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 21ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇದು ಇವತ್ತು ಸಂಜೆ ಅಥವಾ ರಾತ್ರಿ ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 


No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...