Advertise

21 September 2023

22.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ದಕ್ಷಿಣ ಕನ್ನಡ ಗಡಿಭಾಗಗಳ ಸುತ್ತಮುತ್ತ, ಧರ್ಮಸ್ಥಳ, ಕಾರ್ಕಳ, ಕುದುರೆಮುಖ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಕಾಸರಗೋಡು, ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡ, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಇರಬಹುದು. 

ಮೈಸೂರು, ಹಾಸನ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಗದಗ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಸೆಪ್ಟೆಂಬರ್ 22ರ ತನಕ ಉತ್ತರ ಒಳನಾಡು ಹಾಗೂ ಸೆಪ್ಟೆಂಬರ್ 24ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 27ರಿಂದ 3 ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
- ಸಾಯಿಶೇಖರ್ ಬಿ


No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...