Advertise

22 September 2023

23.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು, ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಕುದುರೆಮುಖ, ಶಿೃಂಗೇರಿ, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಧಾರವಾಡ, ಬೆಳಗಾವಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಯಾದಗಿರಿ ಜಿಲ್ಲೆಯಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಸೆಪ್ಟೆಂಬರ್ 24ರ ನಂತರ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ದಕ್ಷಿಣ ಒಳನಾಡು ಭಾಗಗಳಲ್ಲಿ  ಸೆಪ್ಟೆಂಬರ್ 30ರ ತನಕವೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ...