23 September 2023

24.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಉಡುಪಿ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಹಾಸನ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 


No comments:

Post a Comment