Advertise

24 September 2023

25.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಕಡಿಮೆ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಿಂದ ಬೀಸುತ್ತಿರುವ ಗಾಳಿಯ ಒತ್ತಡ (ಮುಂಗಾರು) ತೀರಾ ದುರ್ಬಲಗೊಂಡಿದ್ದರಿಂದ ಹಾಗೂ ವಾತಾವರಣದ ಅಧಿಕ ಉಷ್ಣತೆಯಿಂದಾಗಿ ಪೂರ್ವ ದಿಕ್ಕಿನಿಂದ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯಾಗುತ್ತಿದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...