Advertise

26 September 2023

27.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್ (ಮಹಾರಾಷ್ಟ್ರ - ಕರ್ನಾಟಕ ಗಡಿ ಭಾಗಗಳಲ್ಲಿ) ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಬಹುತೇಕ ಭಾಗಗಳಲ್ಲಿ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಜ್ಯದಲ್ಲಿ ಈಗಿನ ಮಳೆಯ ವಾತಾವರಣವು ಒಕ್ಟೊಬರ್ 2ನೇ ತಾರೀಕಿನವರೆಗೆ ಮುಂದುವರಿಯುವ ಲಕ್ಷಣಗಳಿವೆ ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯಬಹುದು. 

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದು, ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಒಕ್ಟೊಬರ್ 2ನೇ ವಾರದ ನಂತರ ಹಿಂಗಾರು ಆರಂಭವಾಗಬಹುದು. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...