Advertise

29 September 2023

30.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಮಂಗಳೂರು, ಮೂಡಬಿದರೆ, ಕಾರ್ಕಳ, ಬಂಟ್ವಾಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ ಒಂದೆರಡು ಕಡೆ, ವಿಜಯಪುರದ ಒಂದೆರಡು ಕಡೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಪ್ರಸ್ತುತ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಒಕ್ಟೊಬರ್ 1ನೇ ತಾರೀಕಿನ ಸಂಜೆ ಮಹಾರಾಷ್ಟ್ರದ  ಮಲ್ವಾನ್ ಹಾಗೂ ರತ್ನಗಿರಿ ಮಧ್ಯ ಭೂಮಿಗೆ ಪ್ರವೇಶಿಸುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿಯ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ. 

No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...