Advertise

31 October 2023

01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಅಲ್ಲಲ್ಲಿ ಸಾಮಾನ್ಯವಾಗಿದ್ದರೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉಳಿದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ನವೆಂಬರ್ 1 ಹಾಗೂ 2ರಂದು ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ 3ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

30 October 2023

31.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ⚡ ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. 
ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಶಿವಮೊಗ್ಗ ಅಲ್ಲಲ್ಲಿ ಗುಡುಗು ⚡ ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ⚡ ಮಳೆಯ ಮುನ್ಸೂಚನೆ ಇದೆ. 

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ⚡ ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಬೆಳಗಾವಿ - ಉತ್ತರ ಕನ್ನಡ - ಗೋವಾ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು). 
ಹಾವೇರಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಉತ್ತರ ಒಳನಾಡು ಭಾಗಗಳಲ್ಲಿ ಹಿಂಗಾರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 
ಈಗಿನ ಮುನ್ಸೂಚನೆಯಂತೆ ನವೆಂಬರ್ 6ರಿಂದ ಅಂದರೆ ಸ್ವಾತಿ ನಕ್ಷತ್ರ ಕೊನೆಗೊಳ್ಳುತ್ತಿದ್ದಂತೆಯೇ ರಾಜ್ಯದಾದ್ಯಂತ ಮಳೆ ಕ್ಷೀಣಿಸಿ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ. 


29 October 2023

30.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಗುಡುಗು ⚡ ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲೂಕಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ⚡ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ⚡ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ⚡ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ⚡ ಸಹಿತ ಮಳೆಯ ಮುನ್ಸೂಚನೆ ಇದೆ.  
ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಅಲ್ಲಲ್ಲಿ ⚡ ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದರೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 


28 October 2023

29.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ, ರಾತ್ರಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಜೋತೆಗೆ ಸಂಜೆ, ರಾತ್ರಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಇರಬಹುದು. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಚಿಕ್ಕಮಗಳೂರು, ಕುದುರೆಮುಖ, ಶಿೃಂಗೇರಿ, ಕೊಪ್ಪ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಚಾಮರಾಜನಗರದ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಚಂಡಮಾರುತವು ಸಂಪೂರ್ಣ ಶಿಥಿಲಗೊಂಡಿದ್ದರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಮುಂದಿನ ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಲಕ್ಷಣಗಳಿವೆ. 



27 October 2023

28.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಇವತ್ತು ಒಣ ಹವೆ ಇರಲಿದೆ.

ಹಿಂಗಾರು ಚಲನೆ ಆರಂಭವಾಗಿದ್ದು, 
ಒಕ್ಟೊಬರ್ 28ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
29ರಿಂದ ಕರಾವಳಿ ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. 

25 October 2023

26.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. 

ಈಗಿನ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಶ್ಕ ಗಾಳಿಯು ಇನ್ನೆರಡು ದಿನಗಳಲ್ಲಿ ಬದಲಾಗುವ ಸಾಧ್ಯತೆ ಇದೆ. 
ಒಕ್ಟೊಬರ್ 28ರಿಂದ ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ಪುನರಾರಂಭವಾಗುವ ಲಕ್ಷಣಗಳಿವೆ. 
ಆದರೆ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. 
ಒಂದೆರಡು ದಿನಗಳ ಕಾಲ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 



24 October 2023

25.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಪುತ್ತೂರು ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಒಕ್ಟೊಬರ್ 28ರಿಂದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಭಾಗಗ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿನ ತೇಜ್ ಚಂಡಮಾರುತವು ಈಗಾಗಲೇ ಯಮನ್ - ಓಮನ್ ಗಡಿ ಭಾಗಗಳಲ್ಲಿ ಭೂಮಿಗೆ ಪ್ರವೇಶಿಸಿದ್ದು ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 24ರ ತಡರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಲಿದೆ. 


23 October 2023

24.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಬಿಸಿಲು, ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಒಕ್ಟೊಬರ್ 28ರಿಂದ ಕೊಡಗು, ಮೈಸೂರು, ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ. 

ತೇಜ್ ಚಂಡಮಾರುತವು ನಾಳೆ ಮುಂಜಾನೆ ಯಮನ್ - ಓಮನ್ ಗಡಿ ಭಾಗಕ್ಕೆ ಅಪ್ಪಳಿಸಲಿದ್ದು, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 
ಹಿಂಗಾರು ದುರ್ಬಲತೆ ಮುಂದುವರಿಯಲಿದೆ. 


22 October 2023

23.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಒಕ್ಟೊಬರ್ 23ರಿಂದ ರಾಜ್ಯದ ಕರಾವಳಿ ಭಾಗಗಳಲ್ಲೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 
ಅರಬ್ಬಿ ಸಮುದ್ರದಲ್ಲಿನ "ತೇಜ" ಚಂಡಮಾರುತವು ಒಕ್ಟೊಬರ್ 23ರ ರಾತ್ರಿ ದಕ್ಷಿಣ ಓಮನ್ ಕರಾವಳಿಗೆ ಅಪ್ಪಳಿಸಲಿದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. 
ಒಕ್ಟೊಬರ್ ತಿಂಗಳ ಕೊನೆಯವರೆಗೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ

20 October 2023

21.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಪ್ರಸ್ತುತ ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನಷ್ಟು ಬಲಗೊಂಡು ಒಕ್ಟೊಬರ್ 24ರಂದು ಓಮನ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ಒಕ್ಟೊಬರ್ 24ರಂದು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. 
ಒಕ್ಟೊಬರ್ ಕೊನೇಯವರೆಗೂ ಹಿಂಗಾರು ಬಲಗೊಳ್ಳುವ ಸೂಚನೆಗಳು ಕಾಣುತ್ತಿಲ್ಲ. 

19 October 2023

20.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಧರ್ಮಸ್ಥಳ, ಕಾರ್ಕಳ, ಬೆಳ್ತಂಗಡಿ ಸುತ್ತಮುತ್ತ ಮೋಡ, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. 
ಚಿಕ್ಕಮಗಳೂರಿನ ಕುದುರೆಮುಖ, ಶಿೃಂಗೇರಿ ಸುತ್ತಮುತ್ತ ಸಂಜೆ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.  ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಮೋಡ ಅಥವಾ ತುಂತುರು ಇರಬಹುದು. ಉಳಿದ ಚಿಕ್ಕಮಗಳೂರು ಹಾಗೂ ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಒಕ್ಟೊಬರ್ 23 ಅಥವಾ 24ರಂದು ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಗೂ, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಕರಾವಳಿಗೂ ಅಪ್ಪಳಿಸುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪ್ರಭಲಗೊಂಡು ಚಂಡಮಾರುತದ ಸಾಧ್ಯತೆ ಇದ್ದರೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಷ್ಟೇನು ಪ್ರಭಲಗೊಳ್ಳುವ ಲಕ್ಷಣಗಳಿಲ್ಲ. 

18 October 2023

19.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಸಂಜೆ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ವಾಯುಭಾರ ಕುಸಿತ ಉಂಟಾದುದರಿಂದ ಹಿಂಗಾರು ತಟಸ್ಥಗೊಂಡಿದೆ.  ಅರಬ್ಬಿ ಸಮುದ್ರ ವಾಯುಭಾರ ಕುಸಿತವು ಪಶ್ಚಿಮಕ್ಕೂ, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರಕ್ಕೂ ಚಲಿಸುವ ಸಾಧ್ಯತೆ ಇದೆ. ಒಕ್ಟೋಬರ್ 21ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. 


17 October 2023

18.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮಂಡ್ಯ, ರಾಮನಗರ, ಬೆಂಗಳೂರು ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ವಾಯುಭಾರ ಕುಸಿತ ಉಂಟಾಗಲಿರುವುದರಿಂದ ಹಿಂಗಾರು ಆರೋಭ ಮತ್ತಷ್ಟು ವಿಳಂಬವಾಗುವ ಲಕ್ಷಣಗಳಿವೆ. ಒಕ್ಟೊಬರ್ 18ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಸಾಧ್ಯತೆ ಹೆಚ್ಚಿದೆ. ಒಕ್ಟೊಬರ್ 20ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರಕ್ಕೂ, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಕ್ಕೂ ಚಲಿಸುವ ಲಕ್ಷಣಗಳಿವೆ. 

16 October 2023

17.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ 
ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕಾರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಂಡ್ಯ, ರಾಮನಗರ, ಉಳಿದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಕ್ಷೀಣಿಸಿದ್ದು, ಒಕ್ಟೊಬರ್ 17ರಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಹಿಂಗಾರು ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. 

15 October 2023

16.10.23ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


16.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 
ಅರಬ್ಬಿ ಸಮುದ್ರದಲ್ಲಿ ಅಷ್ಟೇನು ಪ್ರಭಾವವಿಲ್ಲದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಒಕ್ಟೊಬರ್ 16ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ. 
ಒಕ್ಟೊಬರ್ 17ರಿಂದ ದುರ್ಬಲಗೊಂಡು ಸಾಮಾನ್ಯ ಮಳೆ ಮುಂದುವರಿದರೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ. 

14 October 2023

15.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 
ಒಕ್ಟೊಬರ್ 16ರಂದು ಮಧ್ಯ ಕೇರಳಕ್ಕೆ ನೇರವಾಗಿ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದ ದಕ್ಷಿಣ ಒಳನಾಡು ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಸಾಧ್ಯತೆ ಇದ್ದರೂ 2 ದಿನಗಳಲ್ಲಿ ಮತ್ತೆ ದುರ್ಬಲಗೊಳ್ಳಲಿದೆ. 

13 October 2023

14.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

ಕೊಡಗು ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಗುಡುಗು ಸಹಿತ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಚಿಕ್ಕಮಗಳೂರಿನ ಕುದುರೆಮುಖ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಡುಪಿ - ಉತ್ತರ ಕನ್ನಡ - ಶಿವಮೊಗ್ಗ ಗಡಿ ಭಾಗದಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಕೆಲವು ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಒಕ್ಟೊಬರ್ 15ರಿಂದ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಗುಡುಗು ಮಳೆ ಪ್ರಾರಂಭವಾಗುವ ಲಕ್ಷಣಗಳಿವೆ. ಹಿಂಗಾರು ಆರಂಭಿಕ ಹಂತದಲ್ಲಿದ್ದು ಅತಿ ದುರ್ಬಲವಾಗಿದೆ. 


12 October 2023

13.102024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಕೊಪ್ಪ ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಇವತ್ತಿನಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗುವ ಲಕ್ಷಣಗಳಿವೆ. ಒಕ್ಟೊಬರ್ 13ರಿಂದ ಎರಡು ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಹಿಂಗಾರು ಆರಂಭಿಕ ಹಂತದಲ್ಲಿದ್ದು, ದುರ್ಬಲ ಹಾಗೂ ಅನಿಶ್ಚಿತತೆ ಮುಂದುವರಿಯಲಿದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...