04.0.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ - ಗೋವಾ - ಬೆಳಗಾವಿ ಗಡಿ ಭಾಗಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ
ಕೊಡಗು ಹಾಗೂ ಚಿಕ್ಕಮಗಳೂರು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ, ಧಾರವಾಡ, ಗದಗ, ಬೆಳಗಾವಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ.
ಇನ್ನೆರಡು ದಿನಗಳಲ್ಲಿ ಮುಂಗಾರು ಸಂಪೂರ್ಣ ಹಿಂದೆ ಸರಿಯಲಿದ್ದು, ಒಕ್ಟೊಬರ್ 8ರ ನಂತರ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಹಿಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಯವಿಟ್ಟು WhatsApp channel subscribe ಮಾಡಿ
https://whatsapp.com/channel/0029Va8ZQD7EVccJBqlu9K3v
No comments:
Post a Comment