05.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಅಲ್ಲಲ್ಲಿ ಹಾಗೂ ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ ಹಾಗೂ ಉತ್ತರ ಕನ್ನಡ ಗಡಿ ಭಾಗಗಳಲ್ಲಿ, ದಾವಣಗೆರೆ ದಕ್ಷಿಣ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ತುಮಕೂರು, ಪಾವಗಡ, ಉಳಿದ ದಾವಣಗೆರೆ ಭಾಗಗಳಲ್ಲಿ ಮೋಡದೊಂದಿಗೆ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದ್ದು, ವಾತಾವರಣದ ತೇವಾಂಶ ಹಾಗೂ ಅಧಿಕ ತಾಪಮಾನದ ಕಾರಣದಿಂದ ಹಿಂಗಾರು ಆರಂಭವಾಗುವ ಮೊದಲೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಒಕ್ಟೊಬರ್ 8ರಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
No comments:
Post a Comment