06.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ, ಉತ್ತರ ಕನ್ನಡ - ಉಡುಪಿ - ಶಿವಮೊಗ್ಗ ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿಕ್ಕಬಳ್ಳಾಪುರ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಒಕ್ಟೊಬರ್ 7ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಒಕ್ಟೊಬರ್ 8 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ ಒಕ್ಟೊಬರ್ 10ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
No comments:
Post a Comment