09.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು
ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ (ಒಂದೆರಡು ಕಡೆ ಭಾರಿ) ಗುಡುಗು ಸಿಡಿಲು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಹಿಂಗಾರು ರೀತಿಯ ಈ ಮಳೆಯು ಒಕ್ಟೊಬರ್ 15ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment