Advertise

11 October 2023

12.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಒಕ್ಟೊಬರ್ 12ರಿಂದ ಮಳೆಯು ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ಮಾತ್ರ ಸೀಮಿತವಾಗುವ ಲಕ್ಷಣಗಳಿವೆ. 
ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಚಟುವಟಿಕೆಗಳು ದುರ್ಬಲಗೊಂಡಿರುವುದರಿಂದ ಸಧ್ಯಕ್ಕೆ ಹಿಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. 

No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...