Advertise

12 October 2023

13.102024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಕೊಪ್ಪ ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಇವತ್ತಿನಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗುವ ಲಕ್ಷಣಗಳಿವೆ. ಒಕ್ಟೊಬರ್ 13ರಿಂದ ಎರಡು ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಹಿಂಗಾರು ಆರಂಭಿಕ ಹಂತದಲ್ಲಿದ್ದು, ದುರ್ಬಲ ಹಾಗೂ ಅನಿಶ್ಚಿತತೆ ಮುಂದುವರಿಯಲಿದೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...