13 October 2023

14.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

ಕೊಡಗು ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಗುಡುಗು ಸಹಿತ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಚಿಕ್ಕಮಗಳೂರಿನ ಕುದುರೆಮುಖ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಡುಪಿ - ಉತ್ತರ ಕನ್ನಡ - ಶಿವಮೊಗ್ಗ ಗಡಿ ಭಾಗದಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಕೆಲವು ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಒಕ್ಟೊಬರ್ 15ರಿಂದ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಗುಡುಗು ಮಳೆ ಪ್ರಾರಂಭವಾಗುವ ಲಕ್ಷಣಗಳಿವೆ. ಹಿಂಗಾರು ಆರಂಭಿಕ ಹಂತದಲ್ಲಿದ್ದು ಅತಿ ದುರ್ಬಲವಾಗಿದೆ. 


No comments:

Post a Comment