Advertise

16 October 2023

17.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ 
ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕಾರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಂಡ್ಯ, ರಾಮನಗರ, ಉಳಿದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಕ್ಷೀಣಿಸಿದ್ದು, ಒಕ್ಟೊಬರ್ 17ರಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಹಿಂಗಾರು ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...