20.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಧರ್ಮಸ್ಥಳ, ಕಾರ್ಕಳ, ಬೆಳ್ತಂಗಡಿ ಸುತ್ತಮುತ್ತ ಮೋಡ, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು.
ಚಿಕ್ಕಮಗಳೂರಿನ ಕುದುರೆಮುಖ, ಶಿೃಂಗೇರಿ ಸುತ್ತಮುತ್ತ ಸಂಜೆ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಮೋಡ ಅಥವಾ ತುಂತುರು ಇರಬಹುದು. ಉಳಿದ ಚಿಕ್ಕಮಗಳೂರು ಹಾಗೂ ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಒಕ್ಟೊಬರ್ 23 ಅಥವಾ 24ರಂದು ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಗೂ, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಕರಾವಳಿಗೂ ಅಪ್ಪಳಿಸುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪ್ರಭಲಗೊಂಡು ಚಂಡಮಾರುತದ ಸಾಧ್ಯತೆ ಇದ್ದರೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಷ್ಟೇನು ಪ್ರಭಲಗೊಳ್ಳುವ ಲಕ್ಷಣಗಳಿಲ್ಲ.
No comments:
Post a Comment