Advertise

22 October 2023

23.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಒಕ್ಟೊಬರ್ 23ರಿಂದ ರಾಜ್ಯದ ಕರಾವಳಿ ಭಾಗಗಳಲ್ಲೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 
ಅರಬ್ಬಿ ಸಮುದ್ರದಲ್ಲಿನ "ತೇಜ" ಚಂಡಮಾರುತವು ಒಕ್ಟೊಬರ್ 23ರ ರಾತ್ರಿ ದಕ್ಷಿಣ ಓಮನ್ ಕರಾವಳಿಗೆ ಅಪ್ಪಳಿಸಲಿದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. 
ಒಕ್ಟೊಬರ್ ತಿಂಗಳ ಕೊನೆಯವರೆಗೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...