24.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಬಿಸಿಲು, ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಒಕ್ಟೊಬರ್ 28ರಿಂದ ಕೊಡಗು, ಮೈಸೂರು, ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.
ತೇಜ್ ಚಂಡಮಾರುತವು ನಾಳೆ ಮುಂಜಾನೆ ಯಮನ್ - ಓಮನ್ ಗಡಿ ಭಾಗಕ್ಕೆ ಅಪ್ಪಳಿಸಲಿದ್ದು, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಹಿಂಗಾರು ದುರ್ಬಲತೆ ಮುಂದುವರಿಯಲಿದೆ.
No comments:
Post a Comment