Advertise

24 October 2023

25.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಪುತ್ತೂರು ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಒಕ್ಟೊಬರ್ 28ರಿಂದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಭಾಗಗ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿನ ತೇಜ್ ಚಂಡಮಾರುತವು ಈಗಾಗಲೇ ಯಮನ್ - ಓಮನ್ ಗಡಿ ಭಾಗಗಳಲ್ಲಿ ಭೂಮಿಗೆ ಪ್ರವೇಶಿಸಿದ್ದು ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 24ರ ತಡರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಲಿದೆ. 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...