30.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಗುಡುಗು ⚡ ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲೂಕಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ⚡ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ⚡ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ⚡ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ⚡ ಸಹಿತ ಮಳೆಯ ಮುನ್ಸೂಚನೆ ಇದೆ.
ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಅಲ್ಲಲ್ಲಿ ⚡ ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದರೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
No comments:
Post a Comment