01.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಆದರೆ ನಿನ್ನೆ ಮುನ್ಸೂಚನೆಯಂತೆ ಮಳೆಯಾಗಿಲ್ಲ).
ಕೊಡಗು ಅಲ್ಲಲ್ಲಿ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ ಒಂದೆರಡು ಕಡೆ ಹಾಗೂ ಬೆಳಗಾವಿ - ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಡಿಸೆಂಬರ್ 2ರ ನಂತರ ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ಚಂಡಮಾರುತವು ಡಿಸೆಂಬರ್ 5 ಅಥವಾ 6ರಂದು ಉತ್ತರ ಆಂದ್ರಾ ಹಾಗೂ ಒಡಿಶಾದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.