Advertise

30 November 2023

01.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಆದರೆ ನಿನ್ನೆ ಮುನ್ಸೂಚನೆಯಂತೆ ಮಳೆಯಾಗಿಲ್ಲ). 

ಕೊಡಗು ಅಲ್ಲಲ್ಲಿ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ ಒಂದೆರಡು ಕಡೆ ಹಾಗೂ ಬೆಳಗಾವಿ - ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ  ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಡಿಸೆಂಬರ್ 2ರ ನಂತರ ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ಚಂಡಮಾರುತವು ಡಿಸೆಂಬರ್ 5 ಅಥವಾ 6ರಂದು ಉತ್ತರ ಆಂದ್ರಾ ಹಾಗೂ ಒಡಿಶಾದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆ ಇದೆ. 
ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. 

29 November 2023

30.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಸುಳ್ಯ ತಾಲೂಕಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ನಿನ್ನೆ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯಾದಂತೆ ಇವತ್ತು ಸಹ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.

ಡಿಸೆಂಬರ್ 1 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದ್ದು, ಮುಂದಿನ 2 ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಡಿಸೆಂಬರ್ 4 ಅಥವಾ 5 ರಂದು ಆಂದ್ರಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಡಿಸೆಂಬರ್ 2ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆ ಇದೆ. 

28 November 2023

29.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶಿೃಂಗೇರಿ, ಆಗುಂಬೆ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ತುಮಕೂರು, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಮತ್ತೂ ಒಂದು ದಿನ ತಡವಾಗಲಿದ್ದು, ನವೆಂಬರ್ 30 ಕ್ಕೆ ರೂಪುಗೊಳ್ಳವ ಲಕ್ಷಣಗಳಿವೆ. 
ವಾಯುಭಾರ ಕುಸಿತವು ಬಲಗೊಳ್ಳುತ್ತಿದ್ದಂತೆಯೇ ಹಿಂಗಾರು ಹಿಂದೆ ಸರಿದು, ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆ ಇದೆ. 



27 November 2023

28.11. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ (  ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಸಾಧ್ಯತೆ ಹೆಚ್ಚಿದೆ.) 

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶಿೃಂಗೇರಿ ,ಕೊಪ್ಪ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಬಾದಾಮಿ, ರಾಮದುರ್ಗ, ಬಾಗಲಕೋಟೆ ಸುತ್ತಮುತ್ತ, ಬಳ್ಳಾರಿಯ ಸಂಡೂರು ಸುತ್ತಮುತ್ತ, ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

ನವೆಂಬರ್ 29 ಅಥವಾ 30ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ. 
ಅಲ್ಲಿಯ ತನಕ ಅಂದರೆ ನವೆಂಬರ್ 30ರ ತನಕ ರಾಜ್ಯದ ಅಲ್ಲಲ್ಲಿ ಮೋಡ ಹಾಗೂ ಮಳೆಯ ಮುನ್ಸೂಚನೆ ಇದೆ. 

26 November 2023

27.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು,ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಬೀದರ್ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಮುಂಗಾರಿನಂತೆ ಹಿಂಗಾರು ದುರ್ಬಲತೆ ಮುಂದುವರಿಯಲಿದೆ.
ನವೆಂಬರ್ 28ರ ಅಂದಾಜು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 

25 November 2023

26.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ,  ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ನವೆಂಬರ್ 28ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ



24 November 2023

25.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ. 

ಒಟ್ಟಿನಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ, ಮಳೆಯ ವಾತಾವರಣ ಇದೆ. 

ನವೆಂಬರ್ 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ನವೆಂಬರ್ 30ರ ತನಕವೂ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 


23 November 2023

24.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡದ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಸೃಷ್ಟಿಯಾಗಿದ್ದು, ನವೆಂಬರ್  24ರಂದು  ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನವೆಂಬರ್ 25ರಿಂದ ಮಳೆಯ ಕಡಿಮೆಯಾಗಿ ಮಲೆನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

22 November 2023

23.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ನವೆಂಬರ್ 23 ಹಾಗೂ 24ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ನವೆಂಬರ್ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

21 November 2023

22.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. 

ಮೈಸೂರು ಒಂದೆರಡು ಕಡೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ನವೆಂಬರ್ 23 ಹಾಗೂ 24 ರಂದು ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನವೆಂಬರ್ 29 ಅಥವಾ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ನವೆಂಬರ್ 25 ಹಾಗೂ 26ರಂದು ಮಹಾರಾಷ್ಟ್ರ ದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

20 November 2023

21.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚನೆಯಂತೆ ನವೆಂಬರ್ 21ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 
ನವೆಂಬರ್ 22ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. 
ನವೆಂಬರ್ 26ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ. 


19 November 2023

20.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಭಾಗಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ನವೆಂಬರ್ 21ರಿಂದ ದಕ್ಷಿಣ ಒಳನಾಡು ಹಾಗೂ ನವೆಂಬರ್ 22ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಿಂಗಾರು ಚುರುಕಾಗುವ ಲಕ್ಷಣಗಳಿವೆ. 

18 November 2023

19.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಮಾನ್ಯ ಗುಡುಗು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. (ನಿನ್ನೆ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಗುಡುಗು ಸಹಿತ ಮಳೆಯಾಗಿದೆ) 

ಕೊಡಗು, ಸೋಮವಾರಪೇಟೆ, ಕುದುರೆಮುಖ, ಶಿೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಕ್ಷೀಣಿಸಿರುವುದರಿಂದ ನವೆಂಬರ್ 19ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 



17 November 2023

18.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 
ಕೊಡಗು ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶ ಕರಾವಳಿಗೆ ತಲುಪಿದ್ದು, ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. 
ಆಂದ್ರಾ ಕರಾವಳಿ ಬಳಿ ನವೆಂಬರ್ 19ರಂದು ಉಂಟಾಗಲಿದ್ದ  ವಾಯುಭಾರ ಕುಸಿತವು ನವೆಂಬರ್ 22 ಕ್ಕೆ ಮುಂದೂಡಲ್ಪಟ್ಟಿದ್ದು  ಅಷ್ಟೇನು ಪ್ರಭಲವಾಗಿರುವ ಸಾಧ್ಯತೆ ಕಾಣುತ್ತಿಲ್ಲ. 
ಪರಿಣಾಮವಾಗಿ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 19ರಿಂದ 22ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕರಾವಳಿ ಮೋಡ ಮಾತ್ರ ಇರಬಹುದು. ಮಧ್ಯ ಹಾಗೂ ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ 


16 November 2023

17.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸ್ವಲ್ಪ ಮೋಡದ ವಾತಾವರಣ ಇರಬಹುದು. 

ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 17ರ ರಾತ್ರಿ ಬಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 
ನವೆಂಬರ್ 19ರಂದು ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವು ಉಂಟಾಗುವ ಲಕ್ಷಣಗಳಿದ್ದು, ಆಂದ್ರಾ ಕರಾವಳಿ ಕಡೆ ಚಲಿಸುವ ಸಾಧ್ಯತೆ. 
ಪರಿಣಾಮವಾಗಿ ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

15 November 2023

16.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಭಾಗಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ವಾಯುಭಾರ ಕುಸಿತವು ನವೆಂಬರ್ 17ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 
ಇದರ ಜೊತೆಗೆ ನವೆಂಬರ್ 18ರಂದು ಅಂಡಮಾನ್ ಕರಾವಳಿಯಲ್ಲಿ ಪ್ರಭಲವಾದ ವಾಯುಭಾರ ಕುಸಿತ ಉಂಟಾಗಲಿದ್ದು, ನವೆಂಬರ್ 20ರ ಅಂದಾಜು ತಮಿಳುನಾಡು, ಆಂದ್ರಾ ಕರಾವಳಿಗೆ ಆಗಮಿಸುವ ಸಾಧ್ಯತೆ ಇದೆ. 
ಪರಿಣಾಮವಾಗಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 


14 November 2023

15.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು 

ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಕೊಲಾರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಬಂಗಾಳಕೊಲ್ಲಿಯಲ್ಲಿ ನವೆಂಬರ್ 15ರಂದು ಉಂಟಾಗುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಪೂರ್ವ ಕರಾವಳಿಯ ಸಮೀಪ ಉತ್ತರಕ್ಕೆ ಚಲಿಸಿ ನವೆಂಬರ್ 18ರಂದು ಪಶ್ಚಿಮ ಬಂಗಾಳ ಹಾಗೂ ಬಂಗ್ಲಾದೇಶ ಕರಾವಳಿಗೆ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ನವೆಂಬರ್ 15 ರಿಂದ 2 ಅಥವಾ 3 ದಿನಗಳ ಕಾಲ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

 

13 November 2023

14.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರವಾಗಿ ಮೋಡ ಇರಬಹುದು. 

ನವೆಂಬರ್ 15ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 16 ಅಥವಾ 17ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 
ಪರಿಣಾಮವಾಗಿ ನವೆಂಬರ್ 14 ಹಾಗೂ 15ರಂದು ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
 
ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ನವೆಂಬರ್ 20ರ ಅಂದಾಜು ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 


11 November 2023

12.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.11.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. 

ನವೆಂಬರ್ 14ರ ತನಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ನವೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ  ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನ ಮುನ್ಸೂಚನೆಯಂತೆ ನವೆಂಬರ್ 14ರಂದ ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ. 
ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...