01 November 2023

02.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಭಾರಿ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಇರಬಹುದು. 

ಈಗಿನ ಈ ಮಳೆಯ ವಾತಾವರಣವು ನವೆಂಬರ್ 8ರ ತನಕ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment