Advertise

02 November 2023

03.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕಾರ್ಕಳ ಸುತ್ತಮುತ್ತ ಸಹ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ನವೆಂಬರ್ 3 ರಿಂದ ಮತ್ತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಚುರುಕಾಗುವ ಸಾಧ್ಯತೆ ಇದೆ. ನವೆಂಬರ್ 9ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...