08.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಹಾಗೂ ಕಾಸರಗೋಡು - ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಸಾಮಾನ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನವೆಂಬರ್ 9ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು,
ನವೆಂಬರ್ 10ರಿಂದ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದಲ್ಲಿ ನವೆಂಬರ್ 8ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಲಿದ್ದು, ಅದು ಪಶ್ಚಿಮಕ್ಕೆ ಚಲಿಸುತ್ತಿದ್ದಂತೆಯೇ ಮಳೆಯೂ ಕಡಿಮೆಯಾಗಲಿದೆ.
No comments:
Post a Comment