https://whatsapp.com/channel/0029Va8ZQD7EVccJBqlu9K3v
09.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಾಗಲೇ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂಥಹ ತಿರುಗುವಿಕೆ ಉಂಟಾಗಿದ್ದು, ಇದು ಪಶ್ಚಿಮಕ್ಕೆ ಚಲಿಸುತ್ತಿದ್ದಂತಯೇ ಈಗಿನ ಹಿಂಗಾರು ಮಳೆಯ ವಾತಾವರಣವು ಕ್ಷೀಣಿಸುವ ಲಕ್ಷಣಗಳಿವೆ. ನವೆಂಬರ್ 10ರ ನಂತರ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಈಗಿನ ಮುನ್ಸೂಚನೆಯಂತೆ ನವೆಂಬರ್ 16ರಿಂದ ದಕ್ಷಿಣ ಒಳನಾಡು. ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ, ಪರಿಸ್ಥಿತಿ ಬದಲಾಗಬಹುದು.
No comments:
Post a Comment