Advertise

10 November 2023

11.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ, ಗುಡುಗು ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಹಾಗೂ ಚಾಮರಾಜನಗರ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಧಾರವಾಡ ಒಂದೆರಡು ಕಡೆ ಗುಡುಗು, ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ವಿಜಾಪುರ ಜಿಲ್ಲೆಗಳ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ನವೆಂಬರ್ 11ರಿಂದ ಹಿಂಗಾರು ಕ್ಷೀಣಿಸಿ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿದ್ದು ನವೆಂಬರ್ 15 ನಂತರ ರಾಜ್ಯದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ, ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಆದರೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಾದರೆ ಒಣ ಹವೆ ಮುಂದುವರಿಯಬಹುದು

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...