13 November 2023

14.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರವಾಗಿ ಮೋಡ ಇರಬಹುದು. 

ನವೆಂಬರ್ 15ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 16 ಅಥವಾ 17ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 
ಪರಿಣಾಮವಾಗಿ ನವೆಂಬರ್ 14 ಹಾಗೂ 15ರಂದು ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
 
ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ನವೆಂಬರ್ 20ರ ಅಂದಾಜು ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 


No comments:

Post a Comment