15.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಲಾರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಬಂಗಾಳಕೊಲ್ಲಿಯಲ್ಲಿ ನವೆಂಬರ್ 15ರಂದು ಉಂಟಾಗುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಪೂರ್ವ ಕರಾವಳಿಯ ಸಮೀಪ ಉತ್ತರಕ್ಕೆ ಚಲಿಸಿ ನವೆಂಬರ್ 18ರಂದು ಪಶ್ಚಿಮ ಬಂಗಾಳ ಹಾಗೂ ಬಂಗ್ಲಾದೇಶ ಕರಾವಳಿಗೆ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ನವೆಂಬರ್ 15 ರಿಂದ 2 ಅಥವಾ 3 ದಿನಗಳ ಕಾಲ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
No comments:
Post a Comment