Advertise

17 November 2023

18.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 
ಕೊಡಗು ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶ ಕರಾವಳಿಗೆ ತಲುಪಿದ್ದು, ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. 
ಆಂದ್ರಾ ಕರಾವಳಿ ಬಳಿ ನವೆಂಬರ್ 19ರಂದು ಉಂಟಾಗಲಿದ್ದ  ವಾಯುಭಾರ ಕುಸಿತವು ನವೆಂಬರ್ 22 ಕ್ಕೆ ಮುಂದೂಡಲ್ಪಟ್ಟಿದ್ದು  ಅಷ್ಟೇನು ಪ್ರಭಲವಾಗಿರುವ ಸಾಧ್ಯತೆ ಕಾಣುತ್ತಿಲ್ಲ. 
ಪರಿಣಾಮವಾಗಿ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 19ರಿಂದ 22ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕರಾವಳಿ ಮೋಡ ಮಾತ್ರ ಇರಬಹುದು. ಮಧ್ಯ ಹಾಗೂ ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...